ಅನರ್ಹ ಶಾಸಕರನ್ನ ಕೈ ಬಿಡುವ ಪ್ರಶ್ನೆಯೇ ಇಲ್ಲ-ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ.. ಕಲಬುರಗಿ,ಸೆ,23,2019(..): ಯಾವುದೇ ಕಾರಣಕ್ಕೂ ಅನರ್ಹ ಶಾಸಕರನ್ನ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅನರ್ಹ ಶಾಸಕರ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಲಿದೆ. ಸ್ಪೀಕರ್ ತೀರ್ಪಿನ ಪ್ರಕಾರ ಅನರ್ಹ ಶಾಸಕರು ಸ್ಪರ್ಧಿಸುವಂತಿಲ್ಲ. ಸುಪ್ರೀಂಕೋರ್ಟ್ ನಲ್ಲಿ ಕಾನೂನಾತ್ಮಕ ವಿಚಾರ ಇಂದು ವಿಚಾರಣೆಗೆ ಬರಲಿದೆ. ಅದಕ್ಕಾಗಿ ಈಗಾಗಲೇ ಎಲ್ಲವನ್ನೂ ಹೇಳಲು ಸಾಧ್ಯವಿಲ್ಲ, ಅನರ್ಹ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಈಗಲೇ ಹೇಳಲಾಗುವುದಿಲ್ಲ ಎಂದರು. ಇನ್ನು ಔರಾದ್ಕರ್ ವರದಿಯನ್ನು ಸ್ಟೇಟ್ ಪೇ ಕಮಿಷನ್ ಕೆಲವೊಂದು ಒಪ್ಪಿದೆ. ಕೆಲವೊಂದು ಒಪ್ಪಿಲ್ಲ. ಹೀಗಾಗಿ ಗೃಹ ಮತ್ತು ಹಣಕಾಸು ಇಲಾಖೆ ಸಭೆ ನಡೆಸಿ ಈ ಬಗ್ಗೆ ಔರಾದ್ಕರ್ ವರದಿ ಜಾರಿಗೆ ಶೀಘ್ರ ಕ್ರಮ ಕೈಗೊಳ್ಳುತ್ತೆವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. : - – – - -