ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…. ಕೊಡಗು,ಸೆ,20,2019(..): ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹರಿಹರದಲ್ಲಿ ನಡೆದಿದೆ. ವಿದ್ಯಾರ್ಥಿ ಮೇಘನ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಮೇಘನ ತಡರಾತ್ರಿ ಮನೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಕೆಯನ್ನ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೇಘನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. : - - -