ಬೆಂಗಳೂರಿನಲ್ಲಿ ಅನುಮಾನಸ್ಪದ ವಸ್ತು ಸ್ಪೋಟ: ಓರ್ವನಿಗೆ ಗಂಭೀರ ಗಾಯ… ಬೆಂಗಳೂರು,ಸೆ,20,2019(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನುಮಾನಸ್ಪದ ವಸ್ತು ಸ್ಪೋಟಗೊಂಡು ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ನಗರದ ಚಿಕ್ಕಜಾಲ ಬಳಿಯ ಕೋಡಗಲಹಟ್ಟಿ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಆಫೀಸ್ ಬಾಯ್ ಪವನ್ ಕುಮಾರ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಗೆ ಒಂದು ಮನೆ ಜಖಂಗೊಂಡಿದ್ದು ಅಕ್ಕಪಕ್ಕ ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ ಎನ್ನಲಾಗಿದೆ. ಸ್ಥಳಕ್ಕೆ ಚಿಕ್ಕಜಾಲ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : - - –