ಪ್ರವಾಹ ಹಿನ್ನೆಲೆ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ರದ್ಧು- ಸಿಎಂ ಬಿಎಸ್ ವೈ ಹೇಳಿಕೆ… ಕಲಬುರ್ಗಿ,ಸೆ,17,2019(..): ಧಾರಾಕಾರ ಮಳೆ ಪ್ರವಾಹ ಉಂಟಾದ ಹಿನ್ನೆಲೆ ಬೆಳಗಾವಿಯಲ್ಲಿ ಈ ಬಾರಿ ಚಳಿಗಾಲದ ಅಧಿವೇಶನ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕಲ್ಬುರ್ಗಿಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಪ್ರವಾಹ ಹಿನ್ನೆಲೆ ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಿದ್ದ ಚಳಿಗಾಲದ ಅಧಿವೇಶನವನ್ನ ರದ್ಧು ಮಾಡಲಾಗಿದೆ. ಬೆಂಗಳೂರಿನಲ್ಲಿ ಈ ಬಾರಿ ಅಧಿವೇಶನ ನಡೆಯಲಿದೆ. ಮುಂದಿನ ಬಾರಿ ಬೆಳಗಾವಿಯಲ್ಲಿ ಅಧಿವೇಶನ ಮಾಡಲಾಗುತ್ತದೆ ಎಂದು ತಿಳಿಸಿದರು. ಉತ್ತರ ಕರ್ನಾಟಕ ನೆರೆ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸೂಕ್ತವಲ್ಲ ಎಂದು ತೀರ್ಮಾನಿಸಲಾಗಿದೆ. ಬೆಳಗಾವಿಯಲ್ಲಿ ಈ ಬಾರಿ ಚಳಿಗಾಲ ಅಧಿವೇಶನವನ್ನ ರದ್ಧು ಮಾಡಿರುವುದಕ್ಕೆ ಯಾರೂ ಬೇಸರಗೊಳ್ಳಬಾರದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು. : - - - –