ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಹಿನ್ನೆಡೆ: ಅರ್ಜಿ ವಿಚಾರಣೆ ಮುಂದೂಡಿಕೆ… ನವದೆಹಲಿ,ಸೆ,17,2019(..): ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ. ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಇಂದು ನಡೆಯಬೇಕಿತ್ತು. ಆದರೆ ಪ್ರಕರಣ ವಿಚಾರಣೆಯಿಂದ ಕರ್ನಾಟಕ ಮೂಲದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಹಿಂದೆ ಸರಿದರು. ಹೀಗಾಗಿ ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಸುಪ್ರೀಂಕೋರ್ಟ್ ಪೀಠದ ಮರುರಚನೆಯಾಗಬೇಕು. ಅರ್ಜಿಯ ತುರ್ತು ವಿಚಾರಣೆ ಮಾಡುವಂತೆ ಅನರ್ಹ ಶಾಸಕರು ಮೂರು ಬಾರಿ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಮನವಿಯನ್ನ ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. : – - –-