ಪ್ರಧಾನಿ ಮೋದಿ ಹುಟ್ಟುಹಬ್ಬ ಹಿನ್ನೆಲೆ: ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ; ಬಿಜೆಪಿ ನಾಯಕರ ಜತೆ ಮಾಜಿ ಸಚಿವ ಜಿಟಿ ದೇವೇಗೌಡ ಭಾಗಿ… ಮೈಸೂರು,ಸೆ,17,2019(..) ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವಾಗಿದ್ದು ಈ ಹಿನ್ನೆಲೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ಬಿಜೆಪಿ ನಾಯಕರು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೊಜೆ ಸಲ್ಲಿಸಿ ಪ್ರಧಾನಿ ಮೋದಿ ಹೆಸರಿನಲ್ಲಿ ಬಿಜೆಪಿ ನಾಯಕರು ಅರ್ಚನೆ ಮಾಡಿಸಿದರು. ಸಿಎಂ ಬಿ.ಎಸ್ ಯಡಿಯೂರಪ್ಪ ಹೆಸರಿನಲ್ಲೂ ಅರ್ಚನೆ ಮಾಡಿಸಲಾಯಿತು. ಸಚಿವ ಸೋಮಣ್ಣ ಜೊತೆ ಮಾಜಿ ಸಚಿವ ಜಿ.ಟಿ ದೇವೇಗೌಡ, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ ಸಾಥ್ ನೀಡಿದರು. ದೇವಸ್ಥಾನದ ಮುಂಭಾಗ ಅಭಿಮಾನಿಗಳು ತಂದ ಸಿಹಿಯನ್ನ ವಿತರಿಸಿ ವಿ.ಸೋಮಣ್ಣ ಸಂಭ್ರಮ ಹಂಚಿಕೊಂಡರು. ಪೂಜೆ ಬಳಿಕ ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನ ಸಚಿವ ವಿ.ಸೋಮಣ್ಣ ವೀಕ್ಷಣೆ ಮಾಡಿದರು. ಚಾಮುಂಡಿ ಬೆಟ್ಟದಲ್ಲಿ ಸ್ವಚ್ಚತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೋಮಣ್ಣ ಸೂಚನೆ ನೀಡಿದರು. ಡಿಸಿ ಅಭಿರಾಮ್ ಜಿ. ಶಂಕರ್ ಸೇರಿದಂತೆ ಮೈಸೂರು ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. : -’- - – -