ಪರಿಹಾರ ಕೇಂದ್ರದಲ್ಲಿ ಜ್ವರದಿಂದ ಮೃತಪಟ್ಟ ಬಾಲಕ: ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ… ಬೆಳಗಾವಿ,ಸೆ,10,2019(..): ಪರಿಹಾರಕೇಂದ್ರದಲ್ಲಿ ಬಾಲಕನೋರ್ವ ಜ್ವರದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಸುರೇಬಾನ್ ಪರಿಹಾರ ಕೇಂದ್ರದಲ್ಲಿ ನಡೆದಿದೆ. ಬಾಲಕ ಜ್ವರದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು ಮೃತಬಾಲಕನ ಕುಟುಂಬಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಬಾಲಕ ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂಬುದು ಗೊತ್ತಿಲ್ಲ. ಇಂದು ಪರಿಹಾರ ಕೇಂದ್ರಕ್ಕೆ ಭೇಟಿ ನೀಡುತ್ತೇನೆ. ಬಾಲಕನ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. : - - - - 5 - - -