ಸೆ.7 ರಂದು ಕಬಿನಿ ಜಲಾಶಯಕ್ಕೆ ಸಿಎಂ ಬಿಎಸ್ ವೈರಿಂದ ಬಾಗೀನ ಅರ್ಪಣೆ ಕಾರ್ಯಕ್ರಮ… ಮೈಸೂರು, ಸೆ, 4,2019(..): ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಎಂಬ ಹೆಸರಿಗೆ ಪಾತ್ರವಾಗಿರುವ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಂತು ಇಂತೂ ಬಾಗೀನ ಭಾಗ್ಯ ಸಿಕ್ಕಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸೊ ಕಾರ್ಯಕ್ರಮ ನಿಗದಿಯಾಗಿದೆ. ಸೆಪ್ಟೆಂಬರ್ 7 ಕ್ಕೆ ಬಾಗೀನ ಅರ್ಪಣೆ ಕಾರ್ಯಕ್ರಮ ನಿಗದಿಯಾಗಿದೆ. ಅಂದು ಶನಿವಾರ ಬೆಳಗ್ಗೆ 11 ಗಂಟೆಗೆ ಸಿಎಂ ಬಿಎಸ್ ಯಡಿಯೂರಪ್ಪ ಕಬಿನಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ , ಶಾಸಕ ಅನೀಲ್ ಚಿಕ್ಕಮಾದು ಸಾಥ್ ನೀಡಲಿದ್ದಾರೆ. ಕಬಿನಿ ತುಂಬಿ ಒಂದು ತಿಂಗಳಾಗಿದ್ದರೂ ಬಾಗಿನ ಅರ್ಪಿಸಿರಲಿಲ್ಲ. ಸಂಪೂರ್ಣ ಭರ್ತಿಯಾಗಿರುವ ಕೆ ಆರ್ ಎಸ್ ಜಲಾಶಯಕ್ಕೆ ಮಾತ್ರ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಿದ್ದರು. ಇದೀಗ ಕಬಿನಿ ಜಲಾಶಯಕ್ಕೂ ಬಾಗೀನ ಅರ್ಪಣೆ ಕಾರ್ಯಕ್ರಮ ನಿಗದಿಯಾಗಿದೆ. : - - - - sep17