ಕನ್ನಡದ ಕೋಟ್ಯಾಧಿಪತಿ ಹಾಟ್ ಸೀಟ್’ನಲ್ಲಿ ಪುನೀತ್ ರಾಜ್ ಕುಮಾರ್ ಜತೆ ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಬೆಂಗಳೂರು, ಸೆಪ್ಟೆಂಬರ್ 09, 2019 (..): ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಿಸುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಈ ವಾರ ಭಾಗವಹಿಸುತ್ತಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪುನೀತ್ ಜತೆ ಜಂಟಿಯಾಗಿ ಕೋಟ್ಯಾಧಿಪತಿ ಆಡಲಿದ್ದಾರೆ. ವಿಶೇಷವೆಂದರೆ ಇಬ್ಬರೂ ಬಿಜೆಪಿ ಸಂಸದರು ಆಡಿ ಸಿಕ್ಕ ಹಣವನ್ನು ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ದಾನ ಮಾಡಲಿದ್ದಾರೆ. ಆ ಮೂಲಕ ಕೋಟ್ಯಾದಿಪತಿಯಲ್ಲಿ ಇವರು ಎಷ್ಟು ಹಣ ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.