ಕೆಎಂಎಫ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ಏನು ಗೊತ್ತೆ…? ಹಾಸನ,ಆ,31,2019(..): ಕೆಎಂಎಫ್ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ. ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಈ ಕುರಿತು ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ. ಕೆಎಂಎಫ್ ಅಧ್ಯಕ್ಷ ಸ್ಥಾನ ತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ. ಜಾರಕಿಹೋಳಿ ನಮ್ಮ ಪಕ್ಷದಲ್ಲಿ ಇದ್ದವರು. ನನ್ನ ಜತೆ ಮಾತುಕತೆ ಮಾಡಿ ಬೆಂಬಲ ಕೋರಿದ್ದರು. ಅದಕ್ಕೆ ನಾನು ಒಪ್ಪಿಕೊಂಡಿದ್ದೇನೆ. ರೈತರಿಗೆ ಅನುಕೂಲವಾಗಬೇಕೆನ್ನುವುದು ನಮ್ಮ ಉದ್ದೇಶ ನಮಗೆ ಯಾವ ಅಧಿಕಾರ ಬೇಡ ಎಂದರು. ಮುಖ್ಯಮಂತ್ರಿ ಯಡಿಯೂರಪ್ಪ ಪದೇ ಪದೇ ನಮ್ಮನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ. ಎಲ್ಲದಕ್ಕೂ ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇನೆ ಎಂದು ಹೆಚ್.ಡಿ ರೇವಣ್ಣ ಟಾಂಗ್ ನೀಡಿದರು. : - - ---