ಮೈಸೂರಿನಿಂದ ಮಂಗಳೂರಿಗೆ ತೆರಳಿದ ಮಾಜಿ ಸಿಎಂ ಸಿದ್ಧರಾಮಯ್ಯ… ಮೈಸೂರು,ಆ,31,2019(..): ನಿನ್ನೆ ಮೈಸೂರು ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಮಂಗಳೂರಿನತ್ತ ತೆರಳಿದ್ದಾರೆ. ಮೈಸೂರಿನಿಂದ ಮಂಗಳೂರಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿನ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಹಾಗೆಯೇ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ವಿಚಾರಣೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ನಾಳೆ ಪ್ರತಿಕ್ರಿಯಿಸುತ್ತೇನೆ ಎಂದು ತೆರಳಿದರು. : - - -.