ಎಐಸಿಸಿ ಸಾಮಾಜಿಕ ಜಾಲತಾಣದ ಉಸ್ತುವಾರಿ: ನಟಿ ರಮ್ಯಾಗೆ ಗೇಟ್ ಪಾಸ್ ಬೆಂಗಳೂರು, ಆಗಸ್ಟ್ 30, 2019 (..):ಎಐಸಿಸಿ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಹೊಸ ತಂಡಕ್ಕೆ ನೀಡಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. ಈ ಮೂಲಕ ಮಾಜಿ ಸಂಸದೆ ರಮ್ಯಾ ಅವರನ್ನು ಸಾಮಾಜಿಕ ಜಾಲತಾಣದ ಮುಖ್ಯಸ್ಥರ ಸ್ಥಾನದಿಂದ ಕೈಬಿಡಲಾಗಿದೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ಸೋಲಿನ ಬಳಿಕ ರಮ್ಯಾ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅಲ್ಲದೆ, ಅವರ ತಂಡ 8 ಕೋಟಿ ರೂ. ಖರ್ಚು ಮಾಡಿದ ಬಗ್ಗೆ ಲೆಕ್ಕ ಕೊಟ್ಟಿಲ್ಲ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ನಂತರದಲ್ಲಿ ಪಕ್ಷದ ವಿವಿಧ ಜವಾಬ್ದಾರಿಗಳಿಂದ ಮತ್ತು ಉಸ್ತುವಾರಿಗಳಿಂದ ರಮ್ಯಾ ದೂರವಾಗಿದ್ದಾರೆ.