ರಾಜ್ಯ ಬಜೆಟ್: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್. ಬೆಂಗಳೂರು,ಫೆಬ್ರವರಿ,16,2024(..):ಮ‍ದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದ್ದು ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಏರಿಸುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮದ್ಯದ ಘೋಷಿತ ಸ್ಲಾಬ್‌ ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ , ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಘೋಷಿಸಿದ್ದಾರೆ. ಬಿಯರ್ ಸೇರಿ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗುವುದು. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. : - - – .