ಇಂದಿರಾ ಕ್ಯಾಂಟಿನ್ ಮುಚ್ಚಿದ್ರೆ ಉಗ್ರ ಹೋರಾಟ- ಬಿಎಸ್ ವೈ ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ.. ಬೆಳಗಾವಿ ,ಆ,27,2019(..): ಇಂದಿರಾ ಕ್ಯಾಂಟಿನ್ ಮುಚ್ಚುವ ಕುರಿತು ಸುದ್ದಿ ಹಬ್ಬಿರುವ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿರಾ ಕ್ಯಾಂಟಿನ್ ಮುಚ್ಚಲು ಮುಂದಾದರೇ ಉಗ್ರ ಹೋರಾಟ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬಡವರಿಗಾಗಿ ಜಾರಿಗೆ ತಂದಿರುವ ಇಂದಿರಾ ಕ್ಯಾಂಟಿನ್ ಯೋಜನೆ ಮುಚ್ಚಬಾರದು. ಇಂದಿರಾ ಕ್ಯಾಂಟಿನ್ ಮುಚ್ಚುವ ಬಗ್ಗೆ ನನಗೆ ಮಾಹಿತಿ ಲಭ್ಯವಾಗಿಲ್ಲ. ಒಂದು ವೇಳೆ ಇಂದಿರಾ ಕ್ಯಾಂಟಿನ್ ಮುಚ್ಚಲು ಮುಂದಾದರೇ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟರು. ಬಿಎಸ್ ವೈ ಕಟ್ಟಿ ಹಾಕಲು ಮೂವರು ಡಿಸಿಎಂ… ಇಂದು ಬಾಗಲಕೋಟೆ ಜಮಖಂಡಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಬಿಜೆಪಿಯ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿ ಪದವಿ ಪಡೆದಿದ್ದಾರೆ. ಅವರನ್ನು ಕಟ್ಟಿ ಹಾಕಲು ಮೂವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ ಎಂದು ಲೇವಡಿ ಮಾಡಿದರು. ಬಿಜೆಪಿಯಲ್ಲಿ ಹಿರಿತನಕ್ಕೆ ಬೆಲೆಯಿಲ್ಲ. ಈ ಹಿಂದೆ ಆರ್.ಅಶೋಕ್, ಈಶ್ವರಪ್ಪ ಅವರನ್ನು ಡಿಸಿಎಂ ಮಾಡಿದ್ದರು. ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಲಾಗಿತ್ತು. ಈಗ ಅವರನ್ನೆಲ್ಲಾ ಕಡೆಗಣಿಸಲಾಗಿದೆ. ಈ ಸರ್ಕಾರ ಬಹಳ ದಿನ ಇರಲ್ಲ ಎಂದು ನುಡಿದರು. : - –- - – – .