ಧೀಮಂತ ನಾಯಕನ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ- ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ… ಬೆಂಗಳೂರು,ಆ,24,2019(..): ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಅರುಣ್ ಜೇಟ್ಲಿ ಅವರು ಪ್ರತಿಪಕ್ಷಗಳು ಮೆಚ್ಚುವಂತಹ ಕೆಲಸ ಮಾಡುತ್ತಿದ್ದರು. ಅಂತಹ ಧೀಮಂತನಾಯಕನ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದರು. ಈ ಕುರಿತು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಅರುಣ್ ಜೇಟ್ಲಿ ಅವರ ಬಗ್ಗೆ ನಾನು ತುಂಬಾ ಗೌರವ ಇಟ್ಟುಕೊಂಡಿದ್ದೇನೆ. ಅವರಿಗೆ ಹೇಗೆ ಶ್ರದ್ಧಾಂಜಲಿ ಸಲ್ಲಿಸಲಿ ಎಂದು ಗೊತ್ತಾಗುತ್ತಿಲ್ಲ. ನಾಳೆ ಅವರ ಅಂತ್ಯ ಸಂಸ್ಕಾರಕ್ಕೆ ದೆಹಲಿಗೆ ಹೋಗುತ್ತೇನೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದರು. ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. : - - - - .