‘ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ’ ಎಂದು ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್…. ನವದೆಹಲಿ,ಆ,22,2019(..): ರಾಜ್ಯ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾದ 17 ಅನರ್ಹ ಶಾಸಕರ ಕುರಿತು ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಾಂಬೆ ಬ್ಲೂ ಬಾಯ್ಸ್ ಸಂತೋಷವಾಗಿರಲಿ ಎಂದಿದ್ದಾರೆ. ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, 40 ವರ್ಷ ಕಟ್ಟಿದ್ದ ಕಾಂಗ್ರೆಸ್ ಪಕ್ಷವನ್ನ ಬೀಳಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಬಸವಣ್ಣನವರ ಬಗ್ಗೆ ಮಾತನಾಡುತ್ತಾರೆ. ಅನರ್ಹ ಶಾಸಕರ ವಿಶ್ವಾಸದ ಮೇಲೆ ಸರ್ಕಾರ ರಚನೆ ಮಾಡಿದ್ದಾರೆ. ಇವರೆಲ್ಲಾ ದೊಡ್ಡ ತ್ಯಾಗಿಗಳು. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ವ್ಯಂಗ್ಯವಾಡಿದರು. ಅನರ್ಹ ಶಾಸಕರು ಬಂದ್ರೆ ಒಟ್ಟಿಗೆ ಕಾಫಿ ಕುಡಿಯುತ್ತೇವೆ. ಇಲ್ಲಿಂದ ಬೆಂಗಳೂರಿಗೆ ವಾಪಸ್ ಹೋದ ಬಳಿಕ ಸುದ್ದಿಗೋಷ್ಠಿ ನಡೆಸುತ್ತೇನೆ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು. ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಸಿದ್ಧರಾಮಯ್ಯ ಭೇಟಿ ಸಾಧ್ಯತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಸೌಹಾರ್ದತೆಗೆ ಭೇಟಿ ಮಾಡಿರಬಹುದು. ಕೆಲವರು ಬಹಿರಂಗವಾಗಿ ಕೆಲವರು ಗೌಪ್ಯವಾಗಿ ಭೇಟಿ ಮಾಡ್ತಾರೆ ಎಂದರು. : - — - -