: ಲಂಚ ಪಡೆದ ಆರೋಪ ಸಾಬೀತು : ಜೈಲು ಶಿಕ್ಷೆಗೊಳಗಾದ ಪ್ರಾದೇಶಿಕ ಸಾರಿಗೆ ಆಯುಕ್ತ, ಮೈಸೂರು, ಆ.22, 2019 : (.. ) : ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರೊಬ್ಬರಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಮೈಸೂರು ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆರ್.ಟಿ.ಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪದ್ಮ ಪ್ರಸಾದ್ ಶಿಕ್ಷೆಗೊಳಗಾದ ಅಧಿಕಾರಿ. ನಗರದ 3 ನೇ ಹೆಚ್ಚುವರಿ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಈ ಆದೇಶ ಪ್ರಕಟಿಸಿದ್ದಾರೆ. ಏನಿದು ಘಟನೆ : ಕೆಲ ತಿಂಗಳ ಹಿಂದೆ ಮೈಸೂರು ನಗರದ ಆರ್.ಟಿ.ಒ ಪದ್ಮ ಪ್ರಸಾದ್, ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ರೆಂಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರ್.ಟಿ.ಒ ಪದ್ಮ ಪ್ರಸಾದ್ ಹಾಗೂ ಏಜೆಂಟ್ ದಯಾನಂದ ವಿರುದ್ಧ ಆರೋಪ ಮಾಡಲಾಗಿತ್ತು.ಈ ಪ್ರಕರಣ ವಿಚಾರಣೆ ನಡೆಸಿದ ನಗರದ 3 ನೇ ಹೆಚ್ಚುವರಿ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಭರತ್ ಕುಮಾರ್ ಅವರು, ಆರೋಪಿ ಲಂಚ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದರು.ಆದೇಶ ಹೊರ ಬೀಳುತ್ತಿದ್ದಂತೆ ಪೊಲೀಸರು ಅಪರಾಧಿಗಳನ್ನು ಬಂಧಿಸಿ ಮೈಸೂರಿನ ಕಾರಾಗೃಹಕ್ಕೆ ಕಳುಹಿಸಿದರು.ಈ ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಮುತ್ತಮ್ಮ ವಾದ ಮಂಡಿಸಿದ್ದರು. : - - - : . . 3rd .