ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ- ಮಾಜಿ ಸಿಎಂ ಹೆಚ್.ಡಿಕೆ. ಬೆಂಗಳೂರು, ಫೆಬ್ರವರಿ 15,2024(..):ರಾಜ್ಯಸಭೆ ಚುನಾವಣೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಈ ಕುರಿತು ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ, ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು. ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು . ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಹೆಚ್.ಡಿಕೆ ಹೇಳಿದರು. : –- – 5th - -.