ಜಾರಕಿಹೊಳಿ ಕುಟುಂಬ ತುಳಿಯೋಕೆ ಯಾರಿಂದಲೂ ಸಾಧ್ಯವಿಲ್ಲ- ಸಚಿವ ಸ್ಥಾನ ಕೈತಪ್ಪಿದ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು ಹೀಗೆ… ಬೆಳಗಾವಿ,ಆ,20,2019(..): ನನಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನವಿಲ್ಲ. ಜಾರಕಿಹೊಳಿ ಕುಟುಂಬ ತುಳಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ರಾಜ್ಯಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆ ಆಗಿದ್ದು 17 ಮಂದಿ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟ ಸೇರಿದ್ದಾರೆ. ಈ ನಡುವೆ ಹಲವು ಮಂದಿ ಶಾಸಕರು ತಮಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ತಮಗೆ ಸಚಿವ ಸ್ಥಾನ ಕೈತಪ್ಪಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಾಲಚಂದ್ರ ಜಾರಕಿಹೊಳಿ, ಮಂತ್ರಿಸ್ಥಾನ ನೀಡುವಂತೆ ನಾನು ಯಾರಿಗೂ ಡೆಡ್ ಲೈನ್ ಕೊಡಲ್ಲ. ಮುಂದಿನ ದಿನಗಳಲ್ಲಿ ಜಾರಕಿಹೊಳಿ ಕುಟುಂಬ ಸಂಪುಟ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಗೆಯೇ ಸಚಿವ ಸ್ಥಾನ ನೀಡದಿದ್ದಕ್ಕೆ ನನಗೆ ಬೇಸರವಿಲ್ಲ. ಈಗಿನ ಸಚಿವರು ಉತ್ತಮವಾಗಿ ಕೆಲಸ ಮಾಡಲಿ ಎಂದು ಬಾಲಚಂದ್ರ ಜಾರಕಿಹೊಳಿ ಶುಭ ಹಾರೈಸಿದರು. : - –- - –