ಸಚಿವ ಸ್ಥಾನ ಸಿಗದಿದ್ದಕ್ಕೆ ಭುಗಿಲೆದ್ದ ಆಕ್ರೋಶ: ಶಾಸಕ ತಿಪ್ಪಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ: ಲಘು ಲಾಠಿಚಾರ್ಜ್… ಚಿತ್ರದುರ್ಗ,ಆ,20,2019(..): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಅಸಮಾಧಾನ ಸ್ಪೋಟಗೊಂಡಿದ್ದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ದ ಆಕ್ರೋಶಗೊಂಡ ಬೆಂಗಲಿಗರು ಬೈಕ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ. ನಗರದ ಗಾಂಧಿ ವೃತ್ತಕ್ಕೆ ಜಮಾಯಿಸಿದ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಅವರ ಬೆಂಬಲಿಗರು ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪಕ್ಷಕ್ಕೆ ನಿಷ್ಠೆಯಿಂದ ಇದ್ದವರು ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಯಾವುದೇ ಸಚಿವ ಸ್ಥಾನ ನೀಡಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಅಸಮಾಧನ ಸ್ಪೋಟಗೊಂಡಿದೆ. ಶಾಸಕ ತಿಪ್ಪಾರೆಡ್ಡಿ ಬೆಂಬಲಿಗರು ಧರಣಿ ನಡೆಸುತ್ತಿದ್ದು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸ್ಥಳಕ್ಕೆ ಎಸ್ ಪಿ ಕೆ.ಅರುಣ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. : – - – - –-