ಉಗ್ರರು ನುಸುಳುವ ಶಂಕೆ ಹಿನ್ನೆಲೆ: ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಬೆಂಗಳೂರು,ಆ.17,2019(..): ಉಗ್ರರು ನುಸುಳುವ ಶಂಕೆ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ನವದೆಹಲಿಯಲ್ಲಿ ಖದ್ದು ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. ಕೇಂದ್ರದ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯಲು ಅವಕಾಶ ನೀಡಲ್ಲ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಉಗ್ರರು ದೇಶದೊಳಗೆ ನುಸುಳಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮೆಜೆಸ್ಟಿಕ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣ, ವಿಧಾನಸೌಧ, ವಿಕಾಸಸೌಧಹೈಕೋರ್ಟ್, ರಾಜಭವನ, ರೈಲ್ವೆ ನಿಲ್ದಾಣ್, ಮಾಲ್ ಗಳು ಸೇರಿ ಹಲವು ಕಡೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮಿಲಿಟರಿ ಸೆಕ್ಯೂರಿಟಿ ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. : -- -