ಬಿಜೆಪಿಯವರಿಗೆ ಮಾನ ಮರ್ಯಾದೆ ಇದೇಯಾ..? ಫೋನ್ ಟ್ಯಾಪಿಂಗ್ ಆರೋಪಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಕಿಡಿ….. ಬೆಂಗಳೂರು,ಆ,15,2019(..): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೇಲೆ ಫೋನ್ ಟ್ಯಾಪಿಂಗ್ ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ಫೋನ್ ಕದ್ಧಾಲಿಕೆ ಬಗ್ಗೆ ನಾನು ತುಂಬಾ ಮಾತನಾಡಬಲ್ಲೆ. ಫೋನ್ ಕದ್ದಾಲಿಕೆಯ ಬಗ್ಗೆ ನನಗೆ ಎಲ್ಲಾ ಗೊತ್ತಿದೆ. ಯಾವ ಕಾಲದಲ್ಲಿ ಏನೇನಾಗಿದೆ ಎಂಬುದು ನನಗೆ ಗೊತ್ತಿದೆ. ಅದರ ಬಗ್ಗೆ ಈಗ ಚರ್ಚೆ ಬೇಕಿಲ್ಲ ಎಂದು ಹೇಳಿದರು. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದೆಯಾ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ ಅಲ್ವಾ ಎಂದು ಕಿಡಿಕಾರಿದ ಹೆಚ್.ಡಿ ದೇವೇಗೌಡರು, ಬಿಜೆಪಿ ಅವರು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ನೇರವಾಗಿ ಹೊತ್ತುಕೊಂಡು ಹೋದ ಜನ ಅವ್ರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಒಂದು ಸಭೆ ನಡೆಸಿ ಹಣ ಕೊಡದೇ ಇರೋದು ದುರಂತ. ಇಲ್ಲಿಯವರೆಗೂ ರಾಜ್ಯಕ್ಕೆ ಒಂದು ರೂಪಾಯಿಯನ್ನೂ ನೀಡಿಲ್ಲ. ಮಳೆ ಕಡಿಮೆಯಾದ ನಂತರ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡುತ್ತೇನೆ ಎಂದು ಹೆಚ್,ಡಿ ದೇವೇಗೌಡರು ತಿಳಿಸಿದರು. : - - - --