ತಮ್ಮ ವಿರುದ್ದದ ಫೋನ್ ಕದ್ದಾಲಿಕೆ ಆರೋಪ: ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…. ಬೆಂಗಳೂರು,ಆ,14,2019(..): ತಮ್ಮ ವಿರುದ್ದ ಕೇಳಿ ಬಂದಿರುವ ಫೋನ್ ಕದ್ಧಾಲಿಕೆ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಿಎಂ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡುವ ಅವಶ್ಯಕತೆ ಅಂದು ನನಗೆ ಇರಲಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ಧಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ದ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನನ್ನ ಫೋನ್ ಕದ್ಧಾಲಿಕೆ ಮಾಡಿದ್ದಾರೆ. ಫೋನ್ ಟ್ಯಾಪ್ ಮಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮೈಸೂರಿನಲ್ಲಿ ಮಾತನಾಡಿ ಆರೋಪಿಸಿದ್ದರು. ಹಾಗೆಯೇ ಬಿಜೆಪಿಯ ಕೆಲ ನಾಯಕರು ಸಹ ಸಿಎಂ ಹೆಚ್.ಡಿ ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದರು. : –- - –