ಈ ಬಾರಿ ಎಸ್.ಎಲ್ ಭೈರಪ್ಪರಿಂದ ಮೈಸೂರು ದಸರಾ ಉದ್ಘಾಟನೆ…? ಮೈಸೂರು, ಆ,14,2019(..): ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನ ಆಹ್ವಾನಿಸಲು ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಡಹಬ್ಬ ದಸರಾ ಮಹೋತ್ಸವ ಆಚರಣೆಗೆ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ದಸರಾ ಪೂರ್ವಭಾವಿ ಸಭೆ ನಡೆಯಿತು. ಪ್ರವಾಹ, ಅತಿವೃಷ್ಟಿ ಹಿನ್ನೆಲೆ ಈ ಬಾರಿ ಸರಳ ದಸರಾ ಆಚರಣೆಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನು ದಸರಾ ಉದ್ಘಾಟನೆಗೆ ಎಸ್.ಎಲ್.ಭೈರಪ್ಪ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಪ್ರತಿವರ್ಷದಂತೆಯೂ ಈ ಬಾರಿಯೂ ದಸರಾ ಆಚರಣೆ ಮಾಡಲಾಗುತ್ತದೆ. ಮೈಸೂರು ದಸರಾ ಆಚರಣೆಗೆ ಯಾವುದೇ ಕೊರತೆಯಾಗಲ್ಲ. ರಾಜ್ಯದ ಪ್ರತಿಭಾವಂತ ಕಲಾವಿದರನ್ನು ಆರಿಸಿಯೇ ಈ ಬಾರಿ ದಸರೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಲು ಮುಂದಾಗುವಂತೆ ಇಲಾಖೆಗಳಿಗೆ ತಿಳಿಸಲಾಗಿದೆ. ರಾಜ್ಯದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. : - – - -