ಶಾಲಾ ಬಸ್ ಮೇಲೆ ಬಿದ್ದ ಮರ: ವಿದ್ಯಾರ್ಥಿಗಳು ಅಪಾಯದಿಂದ ಪಾರು… ದಕ್ಷಿಣ ಕನ್ನಡ,ಆ,14,2019(..): ಮಳೆಯಿಂದಾಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಂಗಳೂರಿನ ನಂತೂರ್ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಶಾಲೆಗೆ ತೆರಳುತ್ತಿದ್ದ ಬಸ್ ಮೇಲೆ ಏಕಾಏಕಿ ಮರ ಬಿದ್ದಿದ್ದು ಬಸ್ ನಲ್ಲಿದ್ದ 17 ಮಂದಿ ವಿದ್ಯಾರ್ಥಿಗಳು ಸದ್ಯ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಲಾ ಪ್ರಾಂಶುಪಾಲರು ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. : – -- – .