ಮನೆ ಕಳೆದುಕೊಂಡ ನೆರೆ ಸಂತ್ರಸ್ತರಿಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ಯಡಿಯೂರಪ್ಪ…… ದಕ್ಷಿಣ ಕನ್ನಡ,ಆ,12,2019(..): ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಹೊಸ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ, ಹಾಗೂ ಭಾಗಶಃ ನಾಶವಾಗಿರುವ ಮನೆಯ ಎಲ್ಲಾ ರೀತಿಯ ರಿಪೇರಿ ಕೆಲಸಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಕುಕ್ಕಾವು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ನೆರೆ ಸಂತ್ರಸ್ತರ ನೋವಿಗೆ ಸಾಂತ್ವನ ಹೇಳಿದರು. ಈ ವೇಳೆ ಪ್ರವಾಹ ಸಂದರ್ಭದಲ್ಲಿ ಭೂಮಿ, ಭೂಮಿ ಪತ್ರ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮನೆ ಕಟ್ಟಿಕೊಳ್ಳಲು ಭೂಮಿ ಗುರುತಿಸಿ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಸಂತ್ರಸ್ತರಿಗೆ ತಕ್ಷಣದಲ್ಲಿ ರೂಪಾಯಿ 10,000.00 ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರು ಹೊಸ ಮನೆ ಕಟ್ಟಿಕೊಳ್ಳುವವವರೆಗೆ ಮಾಸಿಕ 5000.00 ರೂಪಾಯಿ ಬಾಡಿಗೆ ನೀಡಲು ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ನೀಡಿದರು. : - –- –- 5 -