ಮೈಸೂರು: ಮನೆಗೋಡೆ ಕುಸಿದು ತಾಯಿ ಮಗನಿಗೆ ಗಂಭೀರ ಗಾಯ… ಮೈಸೂರು,ಆ,12,2019(..): ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ತಾಯಿ ಮತ್ತು ಮಗ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ರಾಧಮ್ಮ ಮತ್ತು ಮಗ ಸೋನು ಗೋಡೆ ಕುಸಿತದಿಂದ ಗಾಯಗೊಂಡವರು. ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮನೆಯಲ್ಲಿದ್ದ ತಾಯಿ ಮಗ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. : - - - - - --