ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ… ದಕ್ಷಿಣಕನ್ನಡ,ಆ,12,2019(..): ಭಾರಿ ಮಳೆಯಿಂದಾಗಿ ತತ್ತರಿಸಿರುವ ದಕ್ಷಿಣಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ವಿಮಾನದಲ್ಲಿ ಬೆಳಿಗ್ಗೆ 11.30ಕ್ಕೆ ಮಂಗಳೂರಿಗೆ ಆಗಮಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಜಿಲ್ಲೆಯ ಬೆಳ್ತಂಗಡಿ, ಸೂಳ್ಯ ಬಂಟ್ವಾಳ ಸೇರಿ ವಿವಿಧ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಲ್ಲಿಂದ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪರಿಶೀಲನೆ ಬಳಿಕ ಇಂದು ಸಂಜೆ ಮೈಸೂರಿಗೆ ಆಗಮಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿನಲ್ಲೂ ಪ್ರವಾಹ ಪರಿಸ್ಥಿತಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಇನ್ನು ನಾಳೆ ಶಿವಮೊಗ್ಗದಲ್ಲಿ ನೆರೆಪರಿಶೀಲನೆ ನಡೆಸಲಿದ್ದಾರೆ. : – - - - -