ನಟಿ ಸೋನಾಕ್ಷಿ ಸಿನ್ಹಾ ಅರೆಸ್ಟ್ ? ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮುಂಬೈ, ಆಗಸ್ಟ್ 07, 2019 (..): ನಟಿ ಸೋನಾಕ್ಷಿ ಸಿನ್ಹಾ ಅರೆಸ್ಟ್​ ಆಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಸೋನಾಕ್ಷಿ ಕೈಗಳಿಗೆ ಕೋಳ ತೊಡಿಸುತ್ತಿರುವ ದೃಶ್ಯವು ಸೆರೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ‘ಮಿಷನ್​ ಮಂಗಲ್’​ ಚಿತ್ರೀಕರಣದಲ್ಲಿ ಈ ಘಟನೆ ನಡೆದಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಸೋನಾಕ್ಷಿ ನನ್ನನ್ನು ಬಂಧಿಸಲು ಸಾಧ್ಯವಿಲ್ಲ. ನಾನ್ಯರು ಗೊತ್ತಾ? ನಾನು ಮುಗ್ಧೆ, ನನಗೇನು ಗೊತ್ತಿಲ್ಲ. ನನ್ನನ್ನು ಹೇಗೆ ಬಂಧಿಸಲು ಸಾಧ್ಯ? ಎಂದು ಕೂಗುತ್ತಿರುವುದು ಕಂಡುಬರುತ್ತಿದೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಟ್ವಿಟರ್​ನಲ್ಲೂ # ಹಾಗೂ # ಎಂಬ ಹ್ಯಾಶ್​ಟ್ಯಾಗ್​ ಟ್ರೆಂಡ್​ ಆಗಿತ್ತು.