ನಿರಂತರ ಮಳೆಯಿಂದಾಗಿ ಗುಡ್ಡಕುಸಿತ: ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್… ಚಿಕ್ಕಮಗಳೂರು,ಆ,7,2019(..): ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರಮಳೆಯಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಕುಸಿದಿದ್ದು ಈ ಹಿನ್ನೆಲೆ ಇಲ್ಲಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೂರ್ನಾಲ್ಕು ಕಡೆ ಗುಡ್ಡ ಕುಸಿತವಾಗಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತ ಮಾಡಲಾಗಿದೆ. ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸಂಚಾರ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ರಸ್ತೆಯಲ್ಲಿ ಬಿದ್ದಿರುವ ಮಣ್ಣನ್ನ ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಬಣಕಲ್ ಮತ್ತು ಬೆಳ್ತಂಗಡಿ ಪೊಲೀಸರು ಮೊಕ್ಕಾಂಹೂಡಿದ್ದಾರೆ. : –- - -