ಮಾಜಿ ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ಅಂತಿಮ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ… ನವದೆಹಲಿ,ಆ,7,2019(..): ಪ್ರಧಾನಿ ನರೇಂದ್ರ ಮೋದಿ ಅವರು ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸುಷ್ಮಾ ಸ್ವರಾಜ್ ಅವರು ನಿಧನರಾಗಿದ್ದು ಇವರ ನಿಧನಕ್ಕೆ ಅಪಾರ ಸಂಖ್ಯೆಯಲ್ಲಿ ಕಂಬನಿ ಮಿಡಿಯುತ್ತಿದ್ದಾರೆ. ಅಂತಿಮ ದರ್ಶನಕ್ಕಾಗಿ ಸುಷ್ಮಾಸ್ವರಾಜ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಜನಪತ್ ರಸ್ತೆಯಲ್ಲಿರುವ ದವನ್ ದೀಪ್ ಬಿಲ್ಡಿಂಗ್ ನಲ್ಲಿ ಇಡಲಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಸುಷ್ಮಾಸ್ವರಾಜ್ ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಂತಿಮ ದರ್ಶನದ ವೇಳೆ ಪ್ರಧಾನಿ ಮೋದಿ ಗದ್ಗದಿತರಾದ ಘಟನೆ ನಡೆಯಿತು. ಇನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಹ ಸುಷ್ಮಸ್ವರಾಜ್ ಅವರ ಅಂತಿಮ ದರ್ಶನ ಪಡೆದರು. : - – – -