ಹೊಸ ಕರ್ನಾಟಕ ಭವನದ ಕಟ್ಟಡದಲ್ಲಿ ರಾಜ್ಯದ ಸಂಸ್ಕೃತಿ, ಅತಿಥಿ ಸತ್ಕಾರಕ್ಕೆ ಆದ್ಯತೆ ನೀಡಿ- ಸಿಎಂ ಬಿಎಸ್ ವೈ ಸೂಚನೆ… ನವದೆಹಲಿ, ಆ,6,2019(..): ಹೊಸ ಕರ್ನಾಟಕ ಭವನದ ಕಟ್ಟಡದಲ್ಲಿ ಕರ್ನಾಟಕದ ಸಂಸ್ಕೃತಿ, ಅತಿಥಿ ಸತ್ಕಾರ & ಹೆಚ್ಚು ಕೊಠಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ಭವನ ನೂತನ ಕಟ್ಟಡ ನಿರ್ಮಾಣ ಪ್ರಗತಿ ಪರಿಶೀಲನೆ ನಡೆಸಿದರು. ಹೊಸ ಕಟ್ಟಡದ ನೀಲಿನಕ್ಷೆ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ನವದೆಹಲಿಯ ಕರ್ನಾಟಕ ಭವನದಲ್ಲಿ ವಿಸ್ತೃತ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಬಿಎಸ್ ಯಡಿಯೂರಪ್ಪ, ಹಳೆಯ ನಕಾಶೆಯಲ್ಲಿ ಕಚೇರಿ ಕಟ್ಟಡಕ್ಕೆ ಎರಡು ಅಂತಸ್ತುಗಳನ್ನು ಕಾಯ್ದಿರಿಸಲಾಗಿದೆ. ಕರ್ನಾಟಕ ಸಂಸ್ಕೃತಿ ಬಿಂಬ ಕಾಣುತ್ತಿಲ್ಲ, ಹೀಗಾಗಿ ಇರುವ ನಕಾಶೆಯಲ್ಲಿ ಬದಲಾವಣೆ ಮಾಡಿ, ಕಚೇರಿ ಕಟ್ಟಡ ಒಂದು ಅಂತಸ್ತಿಗೆ ಮಾತ್ರ ಸೀಮಿತವಾಗಿರಿಸಿಕೊಳ್ಳಿ, ಅಥಿತಿಗಳ ಕೊಠಡಿ & ಸಂಸ್ಕೃತಿಯ ಪ್ರತಿಬಿಂಬಿಕ್ಕೆ ಆದ್ಯತೆ ನೀಡುವ ಹೊಸ ನೀಲಿನಕ್ಷೆಯನ್ನು ನಾಳೆ ಸಂಜೆಯೊಳಗೆ ಸಿದ್ದಪಡಿಸಿ ಹಾಗೂ ಆಗಸ್ಟ್ 15ರ ಬಳಿಕ ಹಳೆಯ ಕಟ್ಟಡ ತೆರವಿನ ಕೆಲಸಕ್ಕೆ ಚಾಲನೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. : – – - —-