ಕೆಎಸ್ ಒಯುನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ: ರಾಜವಂಶಸ್ಥ ಯದುವೀರ್ ರಿಂದ ಉದ್ಘಾಟನೆ… ಮೈಸೂರು,ಆ,6,2019(..): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಆಯೋಜಿಸಿದೆ. ಕೆಎಸ್ ಒಯುನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಶಿಬಿರವನ್ನ ರಾಜವಂಶಸ್ಥ ಯದುವೀರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ದಲ್ಲಿ ಕುಲಪತಿ ಡಾ ವಿದ್ಯಾಶಂಕರ್ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಯದುವೀರ್ ಅವರು, ಈ ರೀತಿಯ ಶಿಬಿರಗಳಿಂದ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಉಪಯೋಗ ಆಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವಾಗ ಇಂತಹ ಶಿಬಿರಗಳು ಸಹಕಾರಿಯಾಗಲಿವೆ.ಸ್ಪರ್ಧಾತ್ಮಕ ಪರೀಕ್ಷಾ ಶಿಬಿರ ಆಯೋಜನೆ ಮೂಲಕ ಮುಕ್ತ ವಿಶ್ವವಿದ್ಯಾನಿಲಯ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ಲಾಘಿಸಿದರು. : –- – - - .