ಉತ್ತರ ಕರ್ನಾಟಕ, ಚಿಕ್ಕಮಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ: ಜನ ಜೀವನ ಅಸ್ತವ್ಯಸ್ತ ಚಿಕ್ಕಮಗಳೂರು, ಆಗಸ್ಟ್ 05, 2019 (..): ಉತ್ತರ ಕರ್ನಾಟಕದಲ್ಲಿ ಮಳೆರಾಯನ ಆರ್ಭಟಕ್ಕೆ ಆರು ಜಿಲ್ಲೆಗಳು ಪ್ರವಾಹ ಭೀತಿ ಎದುರಿಸುತ್ತಿದ್ದು, ಮಲೆನಾಡು ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ ಮುಂದುವರೆದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಇಂದು ಭಾರೀ ಮಳೆ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.