ಕಾಂಗ್ರೆಸ್ ಏನಾದ್ರೂ ಮಾಡಲಿ: ಕ್ಷೇತ್ರದ ಜನತೆ ನನ್ನಪರ- ಸಿಎಂ ಬಿಎಸ್ ವೈ ಭೇಟಿ ಬಳಿಕ ಅನರ್ಹ ಶಾಸಕ ಬಿ.ಸಿ ಪಾಟೀಲ್ ವಿಶ್ವಾಸ… ಬೆಂಗಳೂರು,ಆ,4,2019(..): ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್ ಕಡೆ ತಿರುಗಿಯೂ ನೋಡುವುದಿಲ್ಲ. ಕಾಂಗ್ರೆಸ್ ಏನು ಬೇಕಾದರೂ ಮಾಡಿಕೊಳ್ಳಲಿ. ಕ್ಷೇತ್ರದ ಜನತೆ ನನ್ನ ಪರವಾಗಿದ್ದಾರೆ ಎಂದು ಅನರ್ಹ ಶಾಸಕ ಬಿ.ಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಬೆಂಗಳೂರಿನಲ್ಲಿ ಅನರ್ಹ ಶಾಸಕ ಬಿ.ಸಿ ಪಾಟೀಲ್ ಭೇಟಿ ಮಾಡಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ಹಿರೇಕೆರೂರು ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಬಳಿ ಮನವಿ ಮಾಡಿದ್ದೇನೆ. ಸಿಎಂ ಬಿಎಸ್ ವೈ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಇದೇ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಕಿಡಿಕಾರಿದ ಬಿ.ಸಿ ಪಾಟೀಲ್, ರಮೇಶ್ ಕುಮಾರ್ ಅವರು ಸದನದಲ್ಲಿ ಸತ್ಯಹರಿಶ್ಚಂದ್ರನಂತೆ ಎಂದು ಹೇಳುತ್ತಾರೆ. ಅವರು ಕೆಲವರ ಮಾತು ಕೇಳಿ ಏಕಪಕ್ಷೀಯವಾಗಿ ಆದೇಶ ನೀಡಿದ್ದಾರೆ. ಇದರಿಂದ ನಾವು ವಿಚಲಿತರಾಗಿಲ್ಲ. ಸುಪ್ರೀಂಕೋರ್ಟ್ ನಲ್ಲಿ ನ್ಯಾಯಕ್ಕಾಗಿ ಮೊರೆಹೋಗಿದ್ದೇವೆ. ನಮಗೆ ನ್ಯಾಯ ಸಿಗುವ ನಂಬಿಕೆಯಿದೆ. ಈ ಬಗ್ಗೆ ನಮ್ಮ ಪರ ವಕೀಲ ಮುಕುಲ್ ರೋಹ್ಟಗಿ ಜತೆ ಚರ್ಚಿಸಿದ್ದೇವೆ ಎಂದರು. : – – – - - -