ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಶರಣು… ಬಳ್ಳಾರಿ,ಆ,1,2019(..): ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಕುಡಿಸಿ ತಾಯಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಕುರಗೋಡು ತಾಲ್ಲೂಕಿನ ಹಳೆ ನೆಲ್ಲೂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಾಯಿ ಶಾಂತಮ್ಮ(26), 6 ವರ್ಷದ ವರಲಕ್ಷ್ಮೀ ಮೃತಪಟ್ಟವರು. ಇನ್ನು 2ವರ್ಷದ ನೇತ್ರ ಎಂಬ ಮಗುವಿನ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆ ಶಾಂತಮ್ಮ ತನ್ನ ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಶರಣಾಗಿದ್ದು ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - -