ವಿಧಾನಸಭೆಯ ನೂತನ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ….. ಬೆಂಗಳೂರು,ಜು,30,2019(..): ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸದೆ ಕಾಂಗ್ರೆಸ್ – ಜೆಡಿಎಸ್ ಹಿಂದೆ ಸರಿದ ಹಿನ್ನೆಲೆ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾದರು. ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ನಾಯಕರು ನಾಮಪತ್ರ ಸಲ್ಲಿಸದೇ ಚುನಾವಣೆಯಿಂದ ದೂರ ಉಳಿದರು. ಆದರೆ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ನಿನ್ನೆ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಘೋಷಣೆ ಮಾಡಿ ಕಲಾಪ ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದ್ದರು. : - - –