ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ…. ಮೈಸೂರು,ಜು,30,2019(..): ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೂಕಿನ ಕೋಡಿ ಅರಳಿಮರದ ಬಳಿ ಈ ಘಟನೆ ನಡೆದಿದೆ.ಸದ್ಯ ಬಸ್‌ನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಮೈಸೂರಿನಿಂದ ಮಾನಂದವಾಡಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ಸಂಭವಿಸಿದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - – - -