ಬಿಜೆಪಿ ಶಾಸಕರೇ ಬಿಎಸ್ವೈ ವಿರುದ್ಧ ಮತ ಹಾಕಬಹುದು !: ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ ಮೈಸೂರು,ಜುಲೈ 28,2019(..): ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಶ ಮತಯಾಚನೆ ಹಿನ್ನಲೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ನಾಳೆ ಅಧಿವೇಶನದಲ್ಲಿ ಬಿಜೆಪಿ ಶಾಸಕರೇ ಯಡಿಯೂರಪ್ಪ ವಿರುದ್ಧ ಮತ ಹಾಕಬಹುದು ಎಂದು ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಸೋಮವಾರದ ಅಧಿವೇಶನದಲ್ಲಿ ಬಹುಮತ ಸಾಬೀತು ಪಡಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದು, ನೂರಕ್ಕೆ ನೂರರಷ್ಟು ಬಹುಮತ ಸಾಬೀತು ಪಡಿಸುತ್ತೇವೆ ಎಂದು ಬಿಜೆಪಿ ಶಾಸಕರು ಕೂಡ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.