ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಕಾಂಗ್ರೆಸ್ ಆಕ್ಷೇಪಿಸಿ ಟ್ವಿಟ್… ಬೆಂಗಳೂರು,ಜು,26,2019(..): ರಾಜ್ಯದ ನೂತನ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕೆ ರಾಜ್ಯ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ ಟ್ವಿಟ್ ಮಾಡಿದೆ. ಬಿಎಸ್ ಯಡಿಯೂರಪ್ಪ ಪ್ರಮಾಣ ವಚನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಗೆ ಇವತ್ತು ಸಂಖ್ಯಾಬಲ ಇಲ್ಲದ ಕಾರಣ. ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡುವುದಾಗಲಿ ಮತ್ತು ಪ್ರಮಾಣ ವಚನ ಸ್ವೀಕರಿಸುವುದಾಗಲಿ ಸಾಧ್ಯವೇ ಇಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಸಾಮಾನ್ಯ ಜ್ಞಾನವನ್ನ ಬಿಎಸ್ ಯಡಿಯೂರಪ್ಪ ಹೊಂದುವುದು ಅವಶ್ಯಕ ಎಂದು ತಿಳಿಸಿದೆ. ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಬಿಎಸ್ ಯಡಿಯೂರಪ್ಪ ಇಂದು ಸಂಜೆ 6ಗಂಟೆಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ ಕುಮಾರಸ್ವಾಮಿ ಅವರನ್ನ ಆಹ್ವಾನಿಸಲಿದ್ದಾರೆ. : - - - -