ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡನೆ: ರಾಜ್ಯದ ನೂತನ ಸಿಎಂ ಆಗಿ ಸಂಜೆ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ… ಬೆಂಗಳೂರು,ಜು,26,2019(..): ರಾಜ್ಯದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಳೆದ ಮೂರು ದಿನಗಳಿಂದ ಸರ್ಕಾರ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಗಾಗಿ ಕಾದು ಕುಳಿತಿದ್ದ ಬಿಎಸ್ ಯಡಿಯೂರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ಸರ್ಕಾರ ರಚಿಸಿ ಇಂದೇ ಪ್ರಮಾಣ ವಚನ ಸ್ವೀಕರಿಸಿ ಎಂದು ಸೂಚಿಸಿದ್ದಾರೆ. ಹೀಗಾಗಿ ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನ ಭೇಟಿಯಾದ ಬಿಎಸ್ ಯಡಿಯೂರಪ್ಪ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೆ ಅವಕಾಶ ನೀಡುವಂತೆ ಕೋರಿದರು. ಸರ್ಕಾರ ರಚನೆಗೆ ರಾಜ್ಯಪಾಲ ವಜುಬಾಯಿ ವಾಲಾ ಆಹ್ವಾನಿಸಿದರು. ಇನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಇಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಹುಮತ ಸಾಬೀತು ಪಡಿಸಿದ ನಂತರ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನಲಾಗಿದೆ. : – - –-- -