ಪೊಲೀಸ್ ಠಾಣೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಎಎಸ್ ಐ ಎಸಿಬಿ ಬಲೆಗೆ… ಬೆಂಗಳೂರು,ಜು,24,2019(..): ಪೊಲೀಸ್ ಠಾಣೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಎಎಸ್ ಐ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯ ಎಎಸ್ ಐ ಶ್ರೀನಿವಾಸ್ ಎಸಿಬಿ ಬಲೆಗೆ ಬಿದ್ದಿರುವುದು. ಶ್ರೀನಿವಾಸ್ ಆರೋಪಿಯನ್ನ ಬಿಡುಗಡೆ ಮಾಡಲು 20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ನಡುವೆ ನಿನ್ನೆ ರಾತ್ರಿ ಮಧ್ಯವರ್ತಿ ಸಹಾಯದಿಂದ ಪೊಲೀಸ್ ಠಾಣೆಯಲ್ಲೇ ಲಂಚ ಸ್ವೀಕರಿಸುವಾಗಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ಎಎಸ್ ಐ ಶ್ರೀನಿವಾಸ್ ಮತ್ತು ಮಧ್ಯವರ್ತಿಯನ್ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. : - – - --