ಪರಿವಾರ ತಳವಾರ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಬೆಂಗಳೂರು,ಫೆಬ್ರವರಿ,10,2024(..):ಪರಿವಾರ ತಳವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಮೂಲಕ ಆ ಸಮುದಾಯಕ್ಕೆ ಸಿಹಿಸುದ್ದಿ ನೀಡಿದೆ. ಈ ಕುರಿತು ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿರುವ ಪರಿವಾರ / ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಮ್ಮ‌ ಸರ್ಕಾರವು ತೀರ್ಮಾನಿಸಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿದ್ದು, ಸಮುದಾಯದ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲು ಸೂಚನೆಯನ್ನು ಕೂಡ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. : – – - .