ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ವಿಶೇಷಾಧಿಕಾರಿಗಳು…. ಬೆಂಗಳೂರು,ಜು,19,2019(..): ಇಂದು ಮಧ್ಯಾಹ್ನ 1.30ಕ್ಕೆ ವಿಶ್ವಾಸಮತಯಾಚನೆ ಮಾಡುವಂತೆ ಸಿಂ ಹೆಚ್.ಡಿ ಕುಮಾರಸ್ವಾಮಿಗೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನೆಲೆ ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲರ ವಿಶೇಷಾಧಿಕಾರಿಗಳು ಭಾಗವಹಿಸಿದ್ದಾರೆ. ಇಂದು ಮಧ್ಯಾಹ್ನ 1.30ಕ್ಕೆ ಬಹುಮತ ಸಾಬೀತು ಪಡಿಸುವಂತೆ ಸಿಎಂಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಈ ಸಂಬಂಧ ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ರನ್ನ ರಾಜ್ಯಪಾಲರ ವಿಷೇಶ ಅಧಿಕಾರಿ ಭೇಟಿ ಮಾಡಿ ಸದನದ ಮಾಹಿತಿ ಪಡೆದಿದ್ದರು. ಹೀಗಾಗಿ ಇಂದು ರಾಜ್ಯಪಾಲರ ವಿಷೇಶಾಧಿಕಾರಿ ವಿಧಾನಸಭೆಯಲ್ಲಿ ಭಾಗವಹಿಸಿ ಕಲಾಪ ವೀಕ್ಷಿಸುತ್ತಿದ್ದಾರೆ. ರಾಜ್ಯಪಾಲರ ಸೂಚನೆ ಮೇರೆಗೆ ವಿಷೇಶಾಧಿಕಾರಿ ಕಲಾಪದಲ್ಲಿ ಭಾಗಿಯಾಗಿದ್ದು ಕಲಾಪದ ಸಂಪೂರ್ಣ ಮಾಹಿತಯನ್ನ ರಾಜ್ಯಪಾಲರಿಗೆ ರವಾನಿಸಲಿದ್ದಾರೆ. : ’ - –-