# ಖಾತೆ ತೆರೆದ ಹ್ಯಾಟ್ರಿಕ್ ಹೀರೋ ಶಿವಣ್ಣ ಬೆಂಗಳೂರು, ಜುಲೈ 19, 2019 (..):ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚಿಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದ್ದರು. ಇದೀಗ ಅಭಿಮಾನಿಗಳ ಬೇಡಿಕೆಯ ಮೇರೆಗೆ ಇನ್ಸ್ಟಾಗ್ರಾಮ್ ಗೂ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ಅತೀ ಹೆಚ್ಚು ಬಳಕೆಯಲ್ಲಿರುವ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಗೆ ಸೆಂಚುರಿ ಸ್ಟಾರ್ ಎಂಟ್ರಿ ಕೊಡುತ್ತಿದ್ದಂತೆ ಸಾಕಷ್ಟು ಮಂದಿ ಫಾಲೋ ಮಾಡುತ್ತಿದ್ದಾರೆ. ಇನ್ಸ್ಟಾಗ್ರಾಮ್ ಗೆ ಎಂಟ್ರಿ ಕೊಟ್ಟ ವಿಚಾರವನ್ನು ಹ್ಯಾಟ್ರಿಕ್ ಹೀರೋ ಪೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.