ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಸಂಸದೆ ಸುಮಲತಾ ಅಂಬರೀಶ್. ನವದೆಹಲಿ,ಫೆಬ್ರವರಿ,9,2024(..):ಲೋಕಸಭೆ ಚುನಾವಣೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ನಡುವೆ ಮಂಡ್ಯ ಟಿಕೆಟ್ ನಿರೀಕ್ಷೆಯಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಉಳಿಸಿಕೊಳ್ಳಲು ಪ್ಲಾನ್ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರನ್ನ ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗುತ್ತಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ ಅವರನ್ನು ಭೇಟಿ ಮಾಡಿ ಟಿಕೆಟ್ ​​ಗಾಗಿ ಮನವಿ ಮಾಡಿದ್ದರು. ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. : - - – - – .