ಬುಧವಾರವೇ ಬಹುಮತ ಸಾಬೀತು ಪಡಿಸಲು ಸಮಯ ಕೇಳಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ… ಬೆಂಗಳೂರು,ಜು,12,2019(..): ಬುಧವಾರವೇ ಬಹುಮತ ಸಾಭೀತು ಪಡಿಸಲು ಸಮಯ ನೀಡಿ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪೀಕರ್ ರಮೇಶ್ ಕುಮಾರ್ ಬಳಿ ಸಮಯ ಕೇಳಿದ್ದಾರೆ. ಇಂದಿನಿಂದ ಆರಂಭವಾದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡುವುದಾಗಿ ಘೋಷಿಸಿದ್ದರು. ಇದೀಗ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬುಧವಾರ ಬಹುಮತ ಸಾಭೀತು ಪಡಿಸಲು ಕಲಾಪ ಸಲಹಾ ಸಮಿತಿಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಗೆ ಮನವಿ ಮಾಡಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಇದೆ. ಹೀಗಾಗಿ ಬುಧವಾರ ಬಹುಮತ ಸಾಭೀತುಪಡಿಸಲು ಸಮಯ ನೀಡಿ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. : - – - – --