ಫೇಸ್’ಬುಕ್, ಟ್ವಿಟ್ಟರ್ ಖಾತೆ ತೆರೆದ ಸೆಂಚುರಿ ಸ್ಟಾರ್ ! ಬೆಂಗಳೂರು, ಜುಲೈ 12, 2019 (..): ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಹುಟ್ಟುಹಬ್ಬದ ದಿನ ಟ್ವಿಟ್ಟರ್ ಹಾಗೂ ಫೇಸ್‍ಬುಕ್‍ನಲ್ಲಿ ಅಧಿಕೃತ ಖಾತೆ ತೆರೆಯುವ ಮೂಲಕ ಅಭಿಮಾನಿಗಳಿಗೆ ಸಪ್ರೈಸ್ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳದ ಶಿವಣ್ಣ ಇದೀಗ ಅಧಿಕೃತವಾಗಿ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆ ತೆರೆದಿದ್ದಾರೆ. ಈ ಬಗ್ಗೆ ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಗುರುವಾರ ಅವರ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿತ್ತು. ಶಿವಣ್ಣ ಅವರ ಜೊತೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ ಕೂಡ ಲಂಡನ್‍ಗೆ ತೆರಳಿದ್ದಾರೆ. ಪುನೀತ್ ರಾಜಕುಮಾರ್ ಅವರು ಕೂಡ ಲಂಡನ್‍ಗೆ ತೆರಳಿ ಅವರ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದಾರೆ.