ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳಿಂದ ವಿಶೇಷ ಪೂಜೆ… ಬೆಂಗಳೂರು:ಜುಲೈ-11:(..) ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭುಜದ ಶಸ್ತ್ರ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲೆಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಶಿವಣ್ಣನಿಗೆ ಇಂದು ಭುಜದ ಶಸ್ತ್ರ ಚಿಕಿತ್ಸೆ ಹಿನ್ನಲೆಯಲ್ಲಿ ಶಿವರಾಜ್ ಕುಮಾರ್ ಸೇನಾ ಸಮಿತಿ’ ಶಸ್ತ್ರಚಿಕಿತ್ಸೆ ಯಶಸ್ವಿ ಆಗಲಿ ಎಂದು ಬೆಂಗಳೂರಿನ ಗವಿಪುರಂ ಶಿವನ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ನಡೆಸಿದೆ. ಈ ಹಿಂದೆಯೇ ಶಿವರಾಜ್‍ಕುಮಾರ್, ಈ ಬಾರಿ ಹುಟ್ಟುಹಬ್ಬಕ್ಕೆ ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳುತ್ತಿದ್ದೇನೆ. ನನಗೆ ಭುಜದ ನೋವು ಆಗಾಗ ಕಾಣಿಸುತ್ತಿದೆ. ಹಾಗಾಗಿ ನಾನು ಶಸ್ತ್ರಚಿಕಿತ್ಸೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ಈಗ ಹೋಗದಿದ್ದರೆ ಅಗಸ್ಟ್ ವರೆಗೂ ಕಾಯಬೇಕು. ಅಲ್ಲಿವರೆಗೆ ನೋವು ಜಾಸ್ತಿ ಆಗುತ್ತದೆ. ಆಗ ನನ್ನ ಸಮಸ್ಯೆ ಜಾಸ್ತಿ ಆಗುತ್ತದೆ ಹೀಗಾಗಿ ಈಗಲೇ ತೆರಳುತ್ತಿರುವುದಾಗಿ ತಿಳಿಸಿದ್ದರು.