ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಆಗ್ರಹ… ಬೆಂಗಳೂರು,ಜು,11,2019(..): ಸ್ಪೀಕರ್ ರಮೇಶ್ ಕುಮಾರ್ ಪಾರದರ್ಶಕವಾಗಿ ತಮ್ಮ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಕಿಡಿಕಾರಿದ ರೇಣುಕಾಚಾರ್ಯ, ನಿನ್ನೆ ವಿಧಾನಸೌಧದಲ್ಲಿ ನಡೆದ ಹೈಡ್ರಾಮವನ್ನ ಸ್ಪೀಕರ್ ನೋಡಿದ್ದಾರೆ. ಆದರೆ ಅದರ ಬಗ್ಗೆ ಸ್ಪೀಕರ್ ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಿದ್ದರು ಆದರೆ ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇನ್ನು ಸ್ಪೀಕರ್ ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಅವರ ಮೇಲೆ ಜನರಿಗಿದ್ದ ನಂಬಿಕೆ ಹೋಗಿದೆ. ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದರು. : - - - -